ಬೆಂಗಳೂರು: ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಡಿ. 17 ಹಾಗೂ 18 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಸೇರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿ. 17 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿಸೆಂಬರ್ 19 ರಿಂದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿ.17 ಹಾಗೂ 18 ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿ.19 ಮತ್ತು 20 ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.