ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಈಗಾಗಲೇ ರಾಜ್ಯಕ್ಕೆ ಚಳಿ ಆರಂಭವಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.