ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕೆ.ಎಲ್. ರಾಹುಲ್ ಶತಕದ ಹೊಸ್ತಿಲಿನಲ್ಲಿ ಎಡವಿದ್ದಾರೆ.
ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕುಸಿತ ಕಂಡಿದ್ದ ಭಾರತ ತಂಡಕ್ಕೆ ಆಸರೆಯಾಗಿದ್ದಾರೆ. ಒಂದೆಡೆ ಆಟಗಾರರು ಪೆವಿಲಿಯನ್ ಪರೇಡ್ ನಡೆಸುತ್ತಿದ್ದರೆ, ಇನ್ನೊಂದೆಡೆ ರಾಹುಲ್ ಕ್ರೀಸ್ ಗೆ ಅಂಟಿಕೊಂಡಿದ್ದರು. 85 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ಉತ್ತಮ ಹೊಡೆತಗಳ ಮೂಲಕ ಗಮನ ಸೆಳೆದರು.
138 ಎಸೆತಗಳಲ್ಲಿ 84 ರನ್ ಬಾರಿಸಿ ಶತಕದತ್ತ ಹೆಜ್ಜೆ ಹಾಕುತ್ತಿದ್ದಾಗ ಸ್ಪಿನ್ನರ್ ನಾಥನ್ ಲಿಯಾನ್ ಎಸೆತವನ್ನು ಗುರುತಿಸುವಲ್ಲಿ ವಿಫಲವಾಗಿ ಕ್ಯಾಚ್ ನೀಡಿದರು. ಈ ಮೂಲಕ ಟೆಸ್ಟ್ ನಲ್ಲಿ 9ನೇ ಶತಕ ಸಿಡಿಸುವ ಅವಕಾಶವನ್ನು ಮತ್ತೊಮ್ಮೆ ಕೈ ಚಲ್ಲಿದರು. ಸದ್ಯ ಭಾರತ 6 ವಿಕೆಟ್ ಕಳೆದುಕೊಂಡು ಬ್ಯಾಟಿಂಗ್ ನಡೆಸುತ್ತಿದೆ. ರವೀಂದ್ರ ಜಡೇಜಾ ಅರ್ಧ ಶತಕ ಸಿಡಿಸಿ ತಂಡಕ್ಕ ಆಸರೆಯಾಗಿದ್ದಾರೆ.