ಬೆಳಗಾವಿ: ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ಶಾಸಕರಿಗೆ 100 ಕೋಟಿ ರೂ. ಅನುದಾನ ನಿಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ.
ಈ ಕುರಿತು ಸಿಎಂಗೆ ಪತ್ರ ಬರೆಯಲಾಗಿದೆ. ಸುವರ್ಣ ಸೌಧದಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲಿ ಈ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ನೂತನವಾಗಿ ಆಯ್ಕೆಯಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಮನವಿ ಮಾಡಿದ್ದಾರೆ. ಬಿಜೆಪಿ ಸದಸ್ಯ ಶಾಸಕ ಸುನೀಲ್ ಕುಮಾರ್ ಈ ಕುರಿತು ಪ್ರಸ್ತಾಪ ಮಾಡಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ಕೂಡ ನಡೆಸಿದ್ದರು.
ವಿಧಾನಸಭೆಗೆ ಪ್ರವೇಶಿಸಿ ಇಲ್ಲಿಯವರೆಗೆ 1 ವರ್ಷ 7 ತಿಂಗಳು ಪೂರ್ಣಗೊಂಡಿವೆ. ನಾವೂ ನೂತನವಾಗಿ ಆಯ್ಕೆಯಾಗಿದ್ದರಿಂದಾಗಿ ನಮ್ಮ ಮೇಲೆ ಹೆಚ್ಚಿನ ನಿರೀಕ್ಷೆಗಳು ಇರುತ್ತವೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಾಗೂ ನಿರ್ವಹಣೆ ಕೆಲಸಗಳಿಗಾಗಿ ಜನರು ಪ್ರತಿ ದಿನ ಮನವಿ ಮಾಡುತ್ತಿರುತ್ತಾರೆ. ಹೀಗಾಗಿ ಅಗತ್ಯ ಯೋಜನೆಗಳನ್ನು ಜಾರಿಗಳಿಸಲು ಸಮರ್ಪಕ ಅನುದಾನ ಮೀಸಲಿಡಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಥಮ ಬಾರಿ ಶಾಸಕರಾಗಿ ಆಯ್ಕೆಯಾದ ನಮ್ಮ ಕ್ಷೇತ್ರಕ್ಕೆ ಮಳೆಹಾನಿ, ಕೃಷಿಹಾನಿ, ಸಮುದ್ರ ಕೊರೆತ, ಆಸ್ಪತ್ರೆ, ಶಾಲಾ ಕಟ್ಟಡ, ರಸ್ತೆಗಳ ದುರಸ್ಥಿ- ನಿರ್ಮಾಣ, ಕಾಲುಸಂಕ ಮತ್ತು ಮೋರಿಗಳ ದುರಸ್ಥಿ-ನಿರ್ಮಾಣ , ನದಿ ದಂಡೆ ಸಂರಕ್ಷಣೆ ಹಾಗೂ ವಿದ್ಯುತ್ -ದಾರಿ ದೀಪಗಳ ಸೌಕರ್ಯ ಸೇರಿದಂತೆ ಎಲ್ಲ ಸಮಸ್ಯೆಗಲನ್ನು ನಿವಾರಿಸುವುದಕ್ಕಾಗಿ ಈಗ ಒಟ್ಟಾರೆ 100 ಕೋಟಿ ರೂ. ಅನುದಾನ ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ.