ದರ್ಶನ್ ಆಸ್ಪತ್ರೆಯಿಂದ ಮನೆಗೆ ಹೋಗಿದ್ದು, ಮಗನ ಹೆಗಲ ಮೇಲೆ ಕೈ ಹಾಕಿ ಕುಂಟುತ್ತ ಸಾಗಿದ್ದಾರೆ.
ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಬಂಧನಕ್ಕೆ ಒಳಗಾಗಿದ್ದರು. ಆದರೆ, ತೀವ್ರ ಬೆನ್ನು ನೋವಿನಿಂದಾಗಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳುವುದಾಗಿ ಕೋರ್ಟ್ ಗೆ ತಿಳಿಸಿದ್ದರು. ಈ ಮಧ್ಯೆ ದರ್ಶನ್ ಗೆ ಜಾಮೀನು ಲಭಿಸಿದೆ.
ಆದರೆ, ಶಸ್ತ್ರ ಚಿಕಿತ್ಸೆಯನ್ನು ಮಾತ್ರ ದರ್ಶನ್ ಮಾಡಿಸಿಕೊಂಡಿಲ್ಲ. ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಕೋರ್ಟ್ ಗೆ ತೆರಳಿ ಜಾಮೀನು ಪ್ರಕ್ರಿಯೆ ಮುಗಿಸಿಕೊಂಡಿದ್ದು, ಇಂದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಈ ವೇಳೆ ಮಗನ ಹೆಗಲ ಮೇಲೆ ಕೈ ಹಾಕಿ ಕುಟುಂಬತ್ತ ಸಾಗಿದ್ದಾರೆ. ಈ ಕುರಿತು ವಿಡಿಯೋಗಳು ವೈರಲ್ ಆಗಿವೆ. ಆದರೆ, ಇನ್ನೂ ದರ್ಶನ್ ಗೆ ಬೆನ್ನು ನೋವು ಕಡಿಮೆಯಾಗಿಲ್ಲ. ಮಗನ ಆಸರೆ ಪಡೆದು ಕಾರು ಏರಿದ್ದಾರೆ.