ಕೋಲಾರ: ಬೊಲೆರೋ ವಾಹನವು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿರುವ ದುರ್ದೈವಿಗಳು ಬೇರೆ ಬೇರೆ ಬೈಕ್ ಗಳಲ್ಲಿ ಸಂಚರಿಸುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಸಾವನ್ನಪ್ಪಿದವರೆಲ್ಲ ಕೂಲಿ ಕೆಲಸ ಮಾಡಿ ಮರಳಿ ಹೋಗುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.