ನಾಲ್ಕು ವರ್ಷದ ಅಪ್ರಾಪ್ತ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಪೈಶಾಚಿಕ ಘಟನೆಯೊಂದು ವರದಿಯಾಗಿದೆ.
ಈ ಘಟನೆ ಜೆಸಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಿಚಯಸ್ಥ ವ್ಯಕ್ತಿಯೇ ಈ ಪೈಶಾಚಿಕ ಕೃತ್ಯ ಎಸಗಲು ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಆರೋಪಿ ಕೂಡ ಅಪ್ರಾಪ್ತ ಬಾಲಕ ಎನ್ನಲಾಗಿದೆ. ಈ ಅಪ್ರಾಪ್ತ ಆಗಾಗ ಮಗುವಿನ ಮನೆಗೆ ಹೋಗಿ ಬಂದು ಮಾಡುತ್ತಿದ್ದ. ಆದರೆ, ನಿನ್ನೆ ರಾತ್ರಿ ಮಗುವಿನ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯ ನಡೆದಿದೆ. ಸದ್ಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.