ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸಿಲಿಕಾನ್ ಸಿಟಿಯ ಯಶವಂತಪುರದ ಬಳಿ ಇರುವ ಐಐಎಸ್ಸಿ ಕಾಲೇಜಿನಲ್ಲಿ ಎಂಟೆಕ್ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ವಿದ್ಯಾರ್ಥಿ ಅನ್ಮೋಲ್ ಗಿಲ್ ನಾಪತ್ತೆಯಾಗಿರುವ ವಿದ್ಯಾರ್ಥಿ ಎನ್ನಲಾಗಿದೆ. ಆತ ಕೊನೆಯದಾಗಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸದ್ಯ ವಿದ್ಯಾರ್ಥಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.