ಸಂಸತ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವೇಳೆ ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ. ಬಿ.ಆರ್. ಅಂಬೇಡ್ಕರ್ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿತ್ತು. ಅಲ್ಲದೇ ಬಿಜೆಪಿ ಕೂಡ ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ.
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದರು ಎಂದು ಸಾರಂಗಿ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಸಂಸತ್ತಿನ ಮಕರ ದ್ವಾರದಲ್ಲಿ ತಳ್ಳಿದ್ದಾರೆಂದು ಕಾಂಗ್ರೆಸ್ ಆರೋಪಿಸಿದ್ದಾರೆ.
ನಾನು ನಿಂತಿದ್ದ ವೇಳೆ ರಾಹುಲ್ ಗಾಂಧಿ ಬೇರೊಬ್ಬ ಸಂಸದರನ್ನು ತಳ್ಳಿದ್ದರು. ಹೀಗಾಗಿ ಆ ಸಂಸದ ನನ್ನ ಮೇಲೆ ಬಿದ್ದರು ಎಂದು ಆರೋಪಿಸಿದ್ದಾರೆ.