ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿನ ನಾಲ್ಕು ಸರ್ಕಾರಿ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದಾರೆ. ನಾಲ್ಕು ಕಚೇರಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ..
ಎಕ್ಸಿಕ್ಯೂಟಿವ್ ಎಂಜಿನಯರ್ ಗಳು, ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್ ಗಳ ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸಹಕಾರ ನಗರ, ಯಲಹಂಕ ಹತ್ತಿರದ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.