ಬೆಂಗಳೂರು: ಸಿ.ಟಿ. ರವಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಸಿ.ಟಿ. ರವಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಅಲ್ಲದೇ, 420 ಅಮಿತ್ ಶಾಗೆ ಧಿಕ್ಕಾರ ಎಂದು ಕೂಗಿ ಆಕ್ರೋಶ. ಅಂಬೇಡ್ಕರ್ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ಧ ಕೂಡ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿರುವ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ. ರವಿ ಅವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕಣ್ಣೀರು ಸುರಿಸಿದ್ದಾರೆ. ನಾನು ನೊಂದು ಹೋಗಿದ್ದೇನೆ. ನನಗೆ ಶಾಕ್ ಆಗಿದೆ. ಅಲ್ಲಿದ್ದವರು ಧೃತರಾಷ್ಟ್ರನಂತೆ ವರ್ತಿಸಿದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.