ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸರು ಶಾಸಕ ಸಿ.ಟಿ. ರವಿ ಅವರನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಕಚೇರಿಗೆ ನಾಯಕ ಬಿ.ಎಲ್. ಸಂತೋಷ್ ಭೇಟಿ ನೀಡಿದ್ದಾರೆ.
ಬಿಜೆಪಿ ಸಂಘಟನಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದಾರೆ. ಇದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿ.ಟಿ. ರವಿ ಅರೆಸ್ಟ್ ಆದ ಬೆನ್ನಲ್ಲೇ ಬಿ.ಎಲ್. ಸಂತೋಷ್ ಭೇಟಿ ಹಲವಾರು ಚರ್ಚೆಗಳಿಗೆ ಕಾರಣವಾಗುತ್ತಿದೆ. ಹಿಂದೆ ಸಿ.ಟಿ. ರವಿ ಕೂಡ ಸಂತೋಷ್ ಅವರ ಬಣದಲ್ಲಿ ಗುರುತಿಸಿಕೊಂಡಿದ್ದರು. ರಾಜಕೀಯ ಸಂಘರ್ಷ ಹಾಗೂ ಅಶ್ಲೀರ ಪದ ಬಳಕೆಯ ಆರೋಪದ ಬೆನ್ನಲ್ಲೇ ಭೇಟಿ ಮಾಡಿರುವುದು ಹಲವು ಚರ್ಚೆಗೆ ಕಾರಣವಾಗಿದೆ. ಬಿ.ಎಲ್. ಸಂತೋಷ್ ಅವರು ಒಂದು ಗಂಟೆಗೂ ಹೆಚ್ಚು ಕಾಲ ಬಿಜೆಪಿ ಕಚೇರಿಯಲ್ಲಿದ್ದರು.
ನಿನ್ನೆಯೇ ನಗರಕ್ಕೆ ಆಗಮಿಸಿದ್ದ ಬಿ.ಎಲ್. ಸಂತೋಷ್ ಅವರು ಮಂಗಳೂರಿನತ್ತ ಹೊರಟಿದ್ದಾರೆ. ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಅಂಬೇಡ್ಕರ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.