ಬೆಂಗಳೂರು: ವಿರಾಟ್ ಕೊಹ್ಲಿಗೆ ಬಿಬಿಎಂಪಿ ಶಾಕ್ ನೀಡಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿರುವ ವಿರಾಟ್ ಕೊಹ್ಲಿ (Virat Kohli) ಸಹ ಮಾಲೀಕತ್ವದ ಒನ್ 8 ಕಮ್ಯೂನ್ (One And Commune) ಬಾರ್ ಮತ್ತು ರೆಸ್ಟೋರೆಂಟ್ ಗೆ ಬಿಬಿಎಂಪಿ ಶಾಕ್ ನೀಡಿದೆ.
ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಎನ್‌ಒಸಿ ಪರವಾನಿಗೆ ಪಡೆಯದೆ ಕಾನೂನು ಉಲ್ಲಂಘನೆ ಮಾಡಿದ್ದಕ್ಕೆ ನೋಟಿಸ್ ನೀಡಿದೆ. ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಎಂಬುವವರು ಈ ಕುರಿತು ದೂರು ನೀಡಿದ್ದರು. ಇದನ್ನು ಆಧರಿಸಿ ಶಾಂತಿನಗರದ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಇದಕ್ಕೂ ಮುನ್ನ ಒಂದು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ಇದಕ್ಕೆ ಬಾರ್ ನಿಂದ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಮತ್ತೆ ನೋಟಿಸ್ ನೀಡಿ, ಲಿಖಿತ ಉತ್ತರ ನೀಡುವಂತೆ ತಾಕೀತು ಮಾಡಿದೆ. ಇಲ್ಲದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದೆ. ಅಗ್ನಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿದ್ದರಿಂದಾಗಿ ನಗರದಲ್ಲಿ ಹಲವಾರು ದುರಂತಗಳು ನಡೆದಿವೆ. ಈ ಹಿನ್ನೆಲೆಯಲ್ಲ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ನಿರ್ಧರಿಸಿದೆ.