ಶಿವಮೊಗ್ಗ: ವಿದ್ಯಾರ್ಥಿನಿಯರ ಜೊತೆ ಆಡಳಿತಾಧಿಕಾರಿ ಅಸಭ್ಯವಾಗಿ ವರ್ತಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಜಿಲ್ಲೆಯ ಸೊರಬದ ಖಾಸಗಿ ನರ್ಸಿಂಗ್ ಕಾಲೇಜಿನ ಆಡಳಿತಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಆಡಳಿತಾಧಿಕಾರಿ ಮಂಜುನಾಥ್ ಎಂಬುವವರ ವಿರುದ್ಧ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.
ಆಡಳಿತಾಧಿಕಾರಿ ವರ್ತನೆಯ ವಿರುದ್ಧ ಸಚಿವ ಮಧು ಬಂಗಾರಪ್ಪಗೆ ದೂರು ನೀಡಲಾಗಿದೆ. ಹೀಗಾಗಿ ಸಚಿವರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಅಲ್ಲದೇ, ವಿದ್ಯಾರ್ಥಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.