ಬೆಂಗಳೂರು: ಪೆನ್ ಡ್ರೈವ್ ಪ್ರಕರಣದ ನಂತರ ರೇವಣ್ಣ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದ ಕುಮಾರಸ್ವಾಮಿ ಈಗ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.
ಇಬ್ಬರೂ ಸಹೋದರರು ಮನೆಯ ದೇವರ ದರ್ಶನ ಮಾಡಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಗ್ರಾಮದಲ್ಲಿನ ತಮ್ಮ ಮನೆ ದೇವರಾದ ದೇವೀರಮ್ಮ ಅಮ್ಮನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಎಚ್.ಡಿ. ರೇವಣ್ಣ ಕೂಡ ಕಾಣಿಸಿಕೊಂಡಿದ್ದಾರೆ. ಇಬ್ಬರು ಜೊತೆಯಾಗಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥ ಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದರು. ಸಹೋದರರು ಮತ್ತೆ ಜೊತೆಯಾಗಿದ್ದಕ್ಕೆ ಹಲವರು ಹಲವು ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.
ಪೆನ್ ಡ್ರೈವ್ ಪ್ರಕರಣ ಹೊರ ಬೀಳುತ್ತಿದ್ದಂತೆ ಕುಮಾರಸ್ವಾಮಿ ಅವರು ಮಾಧ್ಯಮದ ಮುಂದೆ ಬಂದು, ನಮ್ಮ ಕುಟುಂಬ ಬೇರೆ, ರೇವಣ್ಣ ಕುಟುಂಬವೇ ಬೇರೆ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು. ಆನಂತರ ಜೆಡಿಎಸ್ ನ ಯಾವ ಬ್ಯಾನರ್ ನಲ್ಲೂ ರೇವಣ್ಣ ಕಾಣಿಸಿಕೊಂಡಿರಲಿಲ್ಲ. ಈಗ ಮತ್ತೆ ಕಾಣಿಸಿಕೊಂಡಿದ್ದು, ಸಹೋದರರು ಒಂದದಂತೆ ಕಾಣಿಸಿಕೊಂಡಿದ್ದಾರೆ.