ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ವಲಯಗಳ 10 ಪ್ರಸ್ತಾವನೆಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅನುಮೋದನೆ ಸಿಕ್ಕಿತು.
9,823 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಉನ್ನತ ಮಟ್ಟದ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಸೇರಿದಂತೆ ಉತ್ಪಾದನಾ ವಲಯದ ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಯಿತು.
ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ನಲ್ಲಿ ಸೆಮಿಕಂಡಕ್ಟರ್ ವಲಯದಲ್ಲಿ 3,425 ಕೋಟಿ ವೆಚ್ಚದ ಪ್ರಥಮ ಯೋಜನೆಗೆ ಸಭೆಯಲ್ಲಿ ಅನುಮೋದನೆ ಸಿಕ್ಕಿತು. ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನ ಉತ್ಪಾದನೆ ಸಂದರ್ಭದಲ್ಲಿ ರೈತರಿಗೂ ಪಾಲು ನೀಡುವ ಕುರಿತು ಪರಿಶೀಲಿಸಲು ಸಭೆಯಲ್ಲಿ ಸೂಚಿಸಲಾಯಿತು.
ಕೈಗಾರಿಕೆ ಆರಂಭಿಸಲು ಕೆಐಎಡಿಬಿಯಿಂದ ಜಮೀನು ಪಡೆದು ತಟಸ್ಥರಾದರೆ ದಂಡ ವಿಧಿಸುವ ಬಗ್ಗೆಯೂ ಪರಿಶೀಲನೆಗೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದರು.