ಬೆಂಗಳೂರು : ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಆಪ್ತೆಯಿಂದಲೇ ಸಂಕಷ್ಟ ಶುರುವಾಗಿದೆ. ಚಿನ್ನದ ವ್ಯಾಪರಿಗೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವರ್ತೂರ್ ವಿಚಾರಣೆಗೆ ಹಾಜರಾಗಿದ್ದಾರೆ.
ಪುಲಕೇಶಿನಗರ ಉಪ ವಿಭಾಗ ಎಸಿಪಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದಾರೆ. ಎಸಿಪಿ ಗೀತಾ ವಿಚಾರಣೆಗೊಳಪಡಿಸಲಿದ್ದಾರೆ.
ಚಿನ್ನದ ವ್ಯಾಪಾರಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಎಸಗಿದ ಪ್ರಕರಣದಲ್ಲಿ ವರ್ತೂರು ಪ್ರಕಾಶ್‌ಗೆ (Varthur Prakash) ಬಂಧನ ಭೀತಿ ಶುರುವಾಗಿದೆ.
ಆರೋಪಿ ಶ್ವೇತಾ ವಿಚಾರಣೆ ಸಂದರ್ಭದಲ್ಲಿ ಹಲವು ಸ್ಫೋಟಕ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ತಾನು ವಂಚಿಸಿದ ಚಿನ್ನದಲ್ಲಿ ವರ್ತೂರು ಪ್ರಕಾಶ್ ಗೂ ಪಾಲು ನೀಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಕಚೇರಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ಎರಡು ನೋಟಿಸ್ ಗೆ ವಿಚಾರಣೆಗೆ ಹಾಜರಾಗಾದ ವರ್ತೂರ್ ಪ್ರಕಾಶ್, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಬಂಧಿತ ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್ ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್ ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್ ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ. ಕಳೆದ 6 ತಿಂಗಳ ಹಿಂದೆಯಷ್ಟೇ ಶ್ವೇತಾ, ವರ್ತೂರು ಪ್ರಕಾಶ್‌ಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಳು. ಆತ್ಮೀಯತೆ ಬೆಳೆದ ನಂತರ ಶ್ವೇತಾ ಬಳಿಯೇ ವರ್ತೂರು ಪ್ರಕಾಶ್ 10 ಲಕ್ಷ ರೂ. ಸಾಲ ಪಡೆದಿದ್ದಾರೆ ಎಂಬುವುದು ಬಹಿರಂಗವಾಗಿದೆ. ಈ ಕುರಿತು ಪೊಲೀಸರು ಈಗಾಗಲೇ ತನಿಖೆ ಮುಂದುವರೆಸಿದ್ದಾರೆ.