ಸಿ.ಟಿ. ರವಿ ‘ಅಶ್ಲೀಲ’ ಪ್ರಕರಣ ರಾಜ್ಯಪಾಲರ ಅಂಗಳ ತಲುಪಿದೆ.
ಸಿ.ಟಿ. ರವಿ ಪ್ರಕರಣದಲ್ಲಿ ರಾಜ್ಯ ಸರ್ಕಾರ ನಡೆದುಕೊಂಡ ರೀತಿ ಖಂಡನೀಯ. ರಾಜ್ಯ ಸರ್ಕಾರ ನಡೆದುಕೊಂಡಿರುವ ರೀತಿ ಅವಮಾನಕರ ಹಾಗೂ ದ್ವೇಷಮಯವಾಗಿತ್ತು ಎಂದು ಆರೋಪಿಸಿರುವ ಬಿಜೆಪಿ ಇಂದು ಸಂಜೆ 5ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದೆ.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ.
ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ನಾಯಕರು ಸಿ.ಟಿ.ರವಿ ವಿಚಾರವನ್ನು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ, ರಾಜ್ಯ ಸರ್ಕಾರ ನಡೆದುಕೊಂಡ ರೀತಿ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡಲಿದ್ದಾರೆ. ಇದರೊಂದಿಗೆ ರಾಜ್ಯ ಸರ್ಕಾರದ ಇತ್ತೀಚಿನ ಕೆಲವು ವಿದ್ಯಾಮಾನಗಳ ಕುರಿತು ಕೂಡ ಬಿಜೆಪಿ ನಾಯಕರು ಚರ್ಚೆ ನಡೆಸಲಿರುವ ಸಾಧ್ಯತೆ ಇದೆ.