ಸಂಧ್ಯಾ ಚಿತ್ರಮಂದಿರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಗೆ ಚಿಕ್ಕಡಪಲ್ಲಿ ಪೊಲೀಸರು ಮತ್ತೊಮ್ಮೆ ನೊಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗಿದ್ದರು.
ಮನೆಯಿಂದ ವಿಚಾರಣೆಗೆ ತೆರಳುವ ಮುನ್ನ ಮನೆ ಮುಂದೆ ನೆರೆದಿದ್ದ ಅಭಿಮಾನಿಗಳಿಗೆ ಕೈ ಬೀಸಿ, ಪತ್ನಿ ಹಾಗೂ ಮಕ್ಕಳನ್ನು ತಬ್ಬಿಕೊಂಡು, ಹಾಜರಿದ್ದ ತಂದೆ ಅಲ್ಲು ಅರವಿಂದ್ ಹಾಗೂ ಮಾವ ಚಂದ್ರಶೇಖರ ರೆಡ್ಡಿ ಅವರಿಗೆ ಕೈ ಕುಲುಕಿ ವಿಚಾರಣೆಗೆ ತೆರಳಿದ್ದರು. ಈ ಬಾರಿ ವಕೀಲರ ಸಮ್ಮುಖದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 04 ರಂದು ನಟ ಅಲ್ಲು ಅರ್ಜುನ್ ತಮ್ಮ ಪತ್ನಿ, ಮಕ್ಕಳು ಹಾಗೂ ರಶ್ಮಿಕಾ ಮಂದಣ್ಣ ಅವರೊಡನೆ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ತೆರಳಿದ್ದರು. ಈ ವೇಳೆ ಭಾರಿ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು. ನೂಕಾಟದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ಗಂಭೀರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ವಿಚಾರ ಈಗ ತೆಲಂಗಾಣದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಇಡೀ ತೆಲಂಗಾಣ ಸರ್ಕಾರವೇ ಈಗ ನಟ ಅಲ್ಲು ಅರ್ಜುನ್ ವಿರುದ್ಧ ತಿರುಗಿ ಬಿದ್ದಿದೆ.