ಮುನಿರತ್ನ ಮೇಲೆ ಮೊಟ್ಟೆ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಂದಿನ ಲೇಔಟ್ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಮುನಿರತ್ನ ಅವರು ಲಕ್ಷ್ಮೀ ದೇವಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಮುಗಿಸಿ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಘಟನೆಯಾಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮುನಿರತ್ನ ಅವರನ್ನು ರಕ್ಷಿಸಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.