ಕಾರವಾರ: ಮಾರಿಕಾಂಬೆ ಅಮ್ಮನ ದೇವಿಯ ಮರದ ಗೊಂಬೆ ನಾಪತ್ತೆಯಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಭಟ್ಕಳ ತಾಲೂಕಿನ ವಿವಾದಿತ ಸ್ಥಳವಾದ ಮುರಿನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಆಸರಕೇರಿಯ ಜನರು ವನದುರ್ಗಿ ದೇವಸ್ಥಾನದ ಬಳಿಯಿದ್ದ ಅಮ್ಮನ ಹೊರೆ ಸಾಗಿಸಿದ್ದರು. ನಂತರ ಗ್ರಾಮದ ಶಂಸುದ್ದೀನ್ ಸರ್ಕಲ್ ಹತ್ತಿರ ಇದ್ದ ಅಮ್ಮನವರ ಗೊಂಬೆ ಪೂಜೆ ಸಲ್ಲಿಸಲಾಗಿತ್ತು. ಆನಂತರ ಬೇರೆ ಗ್ರಾಮದ ಗ್ರಾಮಸ್ಥರು ಪರಿಶೀಲನೆ ನಡೆಸಿದಾಗ ಬೊಂಬೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ವಿಷಯ ಹಬ್ಬುತ್ತಿದ್ದಂತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಭಟ್ಕಳ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ವೇಳೆ ಕೆಲವು ಹೊತ್ತು ಸ್ಥಳೀಯರಿಗೂ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.