ಬೆಂಗಳೂರು: ಪೊಲೀಸರು ಇಲ್ಲದಿದ್ದರೆ ನನ್ನ ಕೊಲೆಯಾಗುತ್ತಿತ್ತು ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ.
ಮೊಟ್ಟೆ ದಾಳಿಗೆ ಒಳಗಾಗಿದ್ದ ಶಾಸಕ ಮುನಿರತ್ನ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜರಾಜೇಶ್ವರಿ ನಗರದ (RR Nagara) ಬಿಜೆಪಿ ಶಾಸಕ ಮುನಿರತ್ನ(Munirathna) ಮಲ್ಲೇಶ್ವರಂನ ಕೆ.ಸಿ. ಜನರಲ್ ಆಸ್ಪತ್ರೆಯಿಂದ (KC General Hospital) ಇಂದು ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ
ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಆಬ್ಜರ್ವೇಷನ್ ನಲ್ಲಿ ಇರುವಂತೆ ವೈದ್ಯರು ಸೂಚಿಸಿದ್ದರು. ಹೀಗಾಗಿ ಇಡೀ ರಾತ್ರಿ ಮುನಿರತ್ನ ಆಸ್ಪತ್ರೆಯಲ್ಲೇ ಕಳೆದಿದ್ದಾರೆ.
ಈ ವೇಳೆ ಮಾತನಾಡಿರುವ ಮುನಿರತ್ನ, ನಾನು ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆಯಿತು. ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಇತ್ತೀಚೆಗೆ ಹಲವರು ನನಗೆ ಧಮ್ಕಿ ಹಾಕುತ್ತಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ಧಮ್ಕಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.