ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ.
ಮ್ಯಾಕ್ಸ್ ಚಿತ್ರವನ್ನು ಮೆಚ್ಚಿಕೊಂಡಿರುವ ಸಿನಿ ರಸಿಕರು, ಉತ್ತಮ ಸ್ಪಂದನೆ ತೋರಿದ್ದಾರೆ. ಈ ಮೂಲಕ ಈ ವರ್ಷದಲ್ಲಿ ಮೊದಲ ದಿನ ಅತಿ ಹೆಚ್ಚು ಹಣ ಗಳಿಸಿದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಮ್ಯಾಕ್ಸ್ ಪಾತ್ರವಾಗಿದೆ.
ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ 8.50 ಕೋಟಿ ರೂ. ಕಲೆಕ್ಷನ್ ಮಾಡಿದೆ. ಕೆಲವು ದಿನಗಳ ಹಿಂದೆ ಬಿಡುಗಡೆ ಆದ ಉಪೇಂದ್ರ ನಟನೆಯ ‘ಯುಐ’ ಸಿನಿಮಾ ಮೊದಲ 6.75 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಯುಐ ಸಿನಿಮಾ ಹಿಂದಿ, ತೆಲುಗು, ತಮಿಳಿನಲ್ಲಿ ಬಿಡುಗಡೆಯಾಗಿತ್ತು.
ಆದರೆ, ‘ಮ್ಯಾಕ್ಸ್’ ಸಿನಿಮಾ ಕನ್ನಡ, ತಮಿಳು ಮತ್ತು ತೆಲುಗು ಸೇರಿದಂತೆ ಮೂರು ಭಾಷೆಗಳಲ್ಲಿ ಮಾತ್ರ ಬಿಡುಗಡೆ ಮಾಡಲಾಗಿದೆ. ಹಾಗಿದ್ದರೂ ಮೊದಲ ದಿನ ಮ್ಯಾಕ್ಸ್ ಭರ್ಜರಿ ಕಲೆಕ್ಷನ್ ಮಾಡಿದೆ.
ಎರಡನೇ ದಿನದ ಕಲೆಕ್ಷನ್ ಮೊದಲ ದಿನದ ಕಲೆಕ್ಷನ್ ನ ದಾಖಲೆ ಮುರಿಯಬಹುದು ಎನ್ನಲಾಗುತ್ತಿದೆ. ಮೊದಲ ದಿನದ ಗಳಿಕೆಯಲ್ಲಿ ಶೇ. 82ರಷ್ಟು ಕರ್ನಾಟಕದಿಂದಲೇ ಹರಿದು ಬಂದಿದೆ. ಚೆನ್ನೈಗಿಂತಲೂ ‘ಮ್ಯಾಕ್ಸ್’ ಸಿನಿಮಾ ಹೈದರಾಬಾದ್ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದೆ.