ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಅಲ್ಲದೇ, ನಾಳೆ ಸರ್ಕಾರಿ ರಜೆ ಘೋಷಿಸಲಾಗಿದೆ.
ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮಾಜಿ ಪ್ರಧಾನಿಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶ್ರೇಷ್ಠ ನಾಯಕನನ್ನು ಭಾರತ ಇಂದು ಕಳೆದುಕೊಂಡಿದೆ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಕೂಡ ಕಂಬನಿ ಮಿಡಿದಿದ್ದಾರೆ.