ಹುಬ್ಬಳ್ಳಿ: ಇಲ್ಲಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟಕ್ಕೆ ಬಲಿಯಾದ ಮಾಲಾಧಾರಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು (Ayyappa Maladhari) ಗಾಯಗೊಂಡು ಕಿಮ್ಸ್ (Kims) ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ 6 ಜನ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮತ್ತು ಮಂಜು ವಾಗ್ಮೋಡೆ (22) ಈಗಾಗಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.
ಉಣಕಲ್ ನ ಅಚ್ಚವ್ಚನ ಕಾಲೋನಿಯಲ್ಲಿ ಡಿ. 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಡಿ. 29ರಂದು ಶಂಕರ್ ಚವ್ಹಾಣ್ ಮತ್ತು ಮಂಜು ವಾಗ್ಮೋಡೆ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.