ಮುರುಡೇಶ್ವರ: ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಬೀಚ್ ನ ಕಡಲ ತೀರ ಓಪನ್ ಆಗುತ್ತಿದೆ.
ಈ ಮೂಲಕ ಮುರುಡೇಶ್ವರ ಸಮುದ್ರತೀರದಲ್ಲಿ ಹೊಸ ವರ್ಷದ ಸಂಭ್ರಮವನ್ನು ಆಚರಿಸಲು ಅನುವು ಮಾಡಿಕೊಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ, ಕಡಿಮೆ ಸ್ಥಳದಲ್ಲಿ ನಾವು ಸ್ವಿಮ್ಮಿಂಗ್ ಜೋನ್ ಮಾಡಿದ್ದೇವೆ. ನಾಳೆಯಿಂದ ಎಷ್ಟು ಜನ ಬರುತ್ತಾರೆಂದು ನೋಡಿ ಸ್ವಿಮ್ಮಿಂಗ್ ಜೋನ್ ವಿಸ್ತರಿಸಲಾಗುತ್ತದೆ. ಮಂಗಳವಾರದಿಂದ ಮುರುಡೇಶ್ವರದಲ್ಲಿ ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಗೆ ಬರುವ ಪ್ರವಾಸಿಗರ ರಕ್ಷಣೆಯೇ ನಮ್ಮ ಆದ್ಯತೆ. ಕಡಲ ತೀರದಲ್ಲಿ ಸುರಕ್ಷತೆ ಕ್ರಮ ಕೈಗೊಂಡಿದ್ದೇವೆ. ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ಹೇಳಲಾಗಿದೆ ಎಂದು ಕೂಡ ತಿಳಿಸಿದ್ದಾರೆ.
ಕಳೆದ 20 ದಿನಗಳಿಂದ ಮುರುಡೇಶ್ವರ್ ಕಡಲ ತೀರಕ್ಕೆ ನಿರ್ಬಂಧ ಹೇರಲಾಗಿತ್ತು. ಹಿಂದೆ ನಾಲ್ವರು ವಿದ್ಯಾರ್ಥಿನಿಯರ ಸಾವು ಉಂಟಾದ ಹಿನ್ನೆಲೆಯಲ್ಲಿ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ, ಈಗ ಹೊಸ ವರ್ಷದ ಸಂಭ್ರಮಾಚರಣೆಗೆ ಆ ನಿರ್ಬಂಧ ತೆರವುಗೊಳಿಸಲಾಗಿದೆ.