ರಾಜ್ಯದ ಜನರು ಸಂಭ್ರಮದಿಂದ ಹೊಸ ವರ್ಷ ಬರಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಸರ್ಕಾರವು ಶಾಕ್ ನೀಡಲು ಮುಂದಾಗಿದೆ.
ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಸೇರಿದಂತೆ ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಸದ್ಯದಲ್ಲೇ ಟಿಕೆಟ್ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಲಿದೆ ಎನ್ನಲಾಗುತ್ತಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಟಿಕೆಟ್ ದರ ಏರಿಸಬೇಕೆಂದು ಈಗಾಗಲೇ ಪ್ರಸ್ತಾವನೆ ಸಲ್ಲಿಸಿವೆ. ನಾಲ್ಕೂ ನಿಗಮಗಳು ಅಲ್ಲಿನ ಖರ್ಚು ವೆಚ್ಚಗಳನ್ನು ಪರಿಶೀಲಿಸಿ, ಟಿಕೆಟ್ ದರ ಎಷ್ಟು ಹೆಚ್ಚಳ ಮಾಡಬೇಕು ಎಂಬ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
ಕಳೆದ ಕೆಲವು ವರಷಗಳ ಹಿಂದೆ ಬಿಎಂಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. 5 ವರ್ಷಗಳ ಹಿಂದೆ .ಕೆಎಸ್ ಅರ್ ಟಿಸಿ ಮೂರು ನಿಗಮಗಳ ದರ ಏರಿಕೆ ಮಾಡಲಾಗಿತ್ತು. ಆದರೆ, ಈಗ ಡೀಸೆಲೆ ಬೆಲೆ ಏರಿಕೆ, ಬಸ್ ಬಿಡಿ ಭಾಗಗಳ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇನ್ನೊಂದೆಡೆ ಸಂಸ್ಥೆಯ ನೌಕರರ ವೇತನ ಕೂಡ ಹೆಚ್ಚಳವಾಗಿದೆ. ಹೀಗಾಗಿ ನಾಲ್ಕೂ ನಿಗಮಗಳು ಬೆಲೆ ಏರಿಕೆ ಅನಿವಾರ್ಯ ಎಂದು ಹೇಳಿವೆ.
ಹೀಗಾಗಿ ಸಾರಿಗೆ ಇಲಾಖೆಯ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲು ಬೆಲೆ ಏರಿಕೆ ಮಾಡಬಹುದು. ಶೇ. 10 ರಿಂದ ಶೇ. 15ರಷ್ಟು ಬೆಲೆ ಏರಿಕೆಗೆ ನಿಮಗಳು ಬೇಡಿಕೆ ಮುಂದಿಟ್ಟಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮುಂದಿನ ದಿನಗಳಲ್ಲಿ ಈ ಬೆಲೆ ಏರಿಕೆ ತಟ್ಟಲಿದೆ ಎನ್ನಲಾಗುತ್ತಿದೆ.


















