ಕಿಚ್ಚ ಸುದೀಪ್ ಅಭಿನಯದ ‘ಮ್ಯಾಕ್ಸ್’ ಸಿನಿಮಾ ಡಿ. 25ರಂದು ಬಿಡುಗಡೆಯಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ 2024ರಲ್ಲಿ ಹಲವು ದಾಖಲೆಗಳನ್ನು ಬರೆದಿದೆ. 2024ರಲ್ಲಿ ಕೇವಲ ಏಳು ದಿನ ಈ ಚಿತ್ರ ಪ್ರದರ್ಶನ ಕಂಡರೂ ಹಲವು ದಾಖಲೆ ಬರೆದಿದೆ ಎಂದು ಬಾಕ್ಸ್ ಆಫೀಸ್ ಹೇಳುತ್ತಿದೆ.
‘ಮ್ಯಾಕ್ಸ್’ ಚಿತ್ರದ ಹಂಚಿಕೆ ಹಕ್ಕನ್ನು ‘ಕೆಆರ್ಜಿ ಸ್ಟುಡಿಯೋಸ್’ ಪಡೆದುಕೊಂಡಿದೆ. ಈ ಸಂಸ್ಥೆಯಲ್ಲೊಬ್ಬರಾಗಿರುವ ಕಾರ್ತಿಕ್ ಗೌಡ ಟ್ವೀಟ್ ಮಾಡುವುದರ ಮೂಲಕ ಸಂತಸ ಹಂಚಿಕೊಂಡಿದ್ದಾರೆ.
ಈ ವರ್ಷ ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಸಿದ ಸಿನಿಮಾ ಮ್ಯಾಕ್ಸ್’ ಎಂದು ಅವರು ಬರೆದುಕೊಂಡು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಈ ಯಶಸ್ಸಿಗೆ ಕಾರಣವಾದ ಕೆಆರ್ಜಿ ಸ್ಟುಡಿಯೋ ತಂಡಕ್ಕೆ ಧನ್ಯವಾದ ಎಂದಿದ್ದಾರೆ.
2024ರ ಆರಂಭದಲ್ಲಿ ‘ಹನುಮಾನ್’ ಚಿತ್ರವನ್ನು ಕೆಆರ್ಜಿ ಸ್ಟುಡಿಯೋಸ್ ಹಂಚಿಕೆ ಮಾಡಿತ್ತು. ಸದ್ಯ ಮ್ಯಾಕ್ಸ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಕಡೆಗಳಲ್ಲಿ ಚಿತ್ರಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಈ ಚಿತ್ರದ ಗ್ರಾಸ್ ಕಲೆಕ್ಷನ್ 80 ಕೋಟಿ ರೂ. ದಾಟಿದೆ ಎಂಬ ಮಾತು ಕೇಳಿ ಬರುತ್ತಿದೆಯಾದರೂ ಅಧಿಕೃತವಾಗಿ ಹೊರ ಬಿದ್ದಿಲ್ಲ.