ಕಲಬುರಗಿ: ಗುತ್ತಿಗೆದಾರ ಸಚೀನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಬಿಜೆಪಿ-ಕಾಂಗ್ರೆಸ್ ಮಧ್ಯೆ ದೊಡ್ಡ ಟಾಕ್ ವಾರ್ ಶುರುವಾಗಿದೆ.
ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಕೇಳಿ ಬಂದಿದ್ದಕ್ಕೆ ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ. ಈ ಮಧ್ಯೆ ಕಲಬುರಗಿಯ ನಿಜಾಮ ಪ್ರಿಯಾಂಕ್ ಖರ್ಗೆ ಹಾಗೂ ಮತ್ತವರ ರಜಾಕಾರ ರಾಜು ಕಪನೂರರಿಂದ ಜನತೆಗೆ ಹಿಂಸೆಯಾಗುತ್ತಿದೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.
ಹೈದರಾಬಾದ್ ನ ರಜಾಕರು, ನಿಜಾಮರು ಕಲ್ಯಾಣ ಕರ್ನಾಟಕ ಭಾಗದ ಜನರನ್ನು ಹಿಂಸಿಸಿದ ರೀತಿಯಲ್ಲೇ ಕಲಬುರಗಿಯ ನಿಜಾಮ ಪ್ರಿಯಾಂಕ್ ಖರ್ಗೆ ಹಾಗೂ ಮತ್ತವರ ರಜಾಕಾರ ರಾಜು ಕಪನೂರು ಕಲಬುರಗಿ ಜನರನ್ನು ಹಿಂಸಿಸುತ್ತಿದ್ದಾರೆ ಎಂದು ಬಿಜೆಪಿ ಪೋಸ್ಟ್ ಮಾಡಿದೆ.
ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಭಿಯಾನ ಹಮ್ಮಿಕೊಂಡಿದ್ದ ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ಕೂಡ ದಾಖಲಾಗಿದೆ. ಇನ್ನೊಂದೆಡೆ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅವರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ. ಹೀಗಾಗಿ ರಾಜೀನಾಮೆ ಪಡೆಯುವುದಿಲ್ಲ ಎಂದು ಸಿಎಂ ಕೂಡ ಹೇಳಿದ್ದಾರೆ. ಹೀಗಾಗಿ ಈ ವಿಷಯ ಎರಡೂ ಪಕ್ಷಗಳ ಹಾದಿ- ಬೀದಿ ಜಗಳಕ್ಕೆ ಕಾರಣವಾಗುತ್ತಿದೆ.