ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸೇರಿದಂತೆ ನಾಲ್ವರ ಹೆಸರನ್ನು ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇತ್ತೀಚೆಗಷ್ಟೇ ವಿಶ್ವ ಚೆಸ್ ಚಾಂಪಿಯನ್ ಆಗಿದ್ದ 18 ವರ್ಷದ ಡಿ. ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್, ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಜ. 17ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.