ತುಮಕೂರು: ಸಿದ್ಧಂಗಾಶ್ರೀ ಪ್ರಶಸ್ತಿಗೆ ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಹಾಗೂ ಹಿತೈಷಿಗಳ ಸಂಘ ನೀಡುವ 2024ನೇ ಸಾಲಿನ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ (Siddagangashree Award) ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ (Go Ru Channabasappa) ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ.
ಈ ಪ್ರಶಸ್ತಿಯು 1 ಲಕ್ಷ ರೂ. ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಹೊಂದಿರುತ್ತದೆ. ಜ.21ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ಶಿವಕುಮಾರ ಸ್ವಾಮೀಜಿ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.