ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಸತೀಶ್ ಕುಮಾರ್(25) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ. ರಾಜಧಾನಿಯ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಸತೀಶ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ಕಾಲೇಜಿನಲ್ಲಿದ್ದಾಗಿನಿಂದಲೂ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿ ಕೂಡ ಸತೀಶ್ ನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇಬ್ಬರು ಒಟ್ಟಿಗೆ ಓಡಾಡಿದ್ದಾರೆ. ಆದರೆ, ಇತ್ತೀಚೆಗೆ ಯುವತಿ ದೂರವಾಗಿದ್ದಕ್ಕೆ ಸತೀಶ್ ಸಾಕಷ್ಟು ನೊಂದಿದ್ದ. ಮನೆಯಲ್ಲಿನ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.