ತುಮಕೂರು: ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ಪಿ ರಾಮಚಂದ್ರಪ್ಪ ಅಮಾನತಾಗಿದ್ದಾರೆ.
ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ತಮ್ಮ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿವೈಎಸ್ಪಿಯನ್ನು ಅಮಾನತು ಮಾಡಿ ಡಿಜಿ ಆದೇಶ ಹೊರಡಿಸಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ವೇಳೆ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ಪಿ ಕಚೇರಿಗೆ ಕರೆಯಿಸಲಾಗಿತ್ತು. ಆದರೆ, ಕಚೇರಿಯಲ್ಲಿ ಮಹಿಳೆಯನ್ನು ಪುಸಲಾಯಿಸಿ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.ಈ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ, ಅಧಿಕಾರಿಯ ಕೃತ್ಯಕ್ಕೆ ಸಾರ್ವಜನಿಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.