ತುಮಕೂರು: ಮಹಿಳೆ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಮಧುಗಿರಿಯ ಡಿವೈಎಸ್ಪಿ ರಾಮಚಂದ್ರಪ್ಪ ಅಮಾನತಾದ ಬೆನ್ನಲ್ಲೇ ಅರೆಸ್ಟ್ ಆಗಿದ್ದಾರೆ.
ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದ, ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಡಿವೈಎಸ್ಪಿಯನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದರು. ಇದರ ಬೆನ್ನಲ್ಲೇ ಈಗ ಪೊಲೀಸರು ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ. ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನ್ಯಾಯ ಕೊಡಿಸಬೇಕೆಂದು ದೂರು ನೀಡಿದ್ದರು.
ಆಗ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ. ನಂತರ ಮಹಿಳೆಯನ್ನು ಕಚೇರಿಗೆ ಕರೆಸಲಾಗಿದೆ. ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ರಾಸಲೀಲೆ ನಡೆಸಿದ್ದಾನೆ. ಈ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆನಂತರ ಇದು ವೈರಲ್ ಆಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ.