ರಾಜ್ಯದ ಕೆಲವೆಡೆ ಚಳಿ ಹೆಚ್ಚಾಗಲಿದ್ದು, ಹಲವೆಡೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ರಾಜ್ಯದ ಒಂದೆರಡು ಜಿಲ್ಲೆಗಳಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹಮಾಮಾನ ಇಲಾಖೆ ಅಧಿಕಾರಿಗಳು(IMD Officials) ಹೇಳಿದ್ದಾರೆ. ಉತ್ತರ ಒಳನಾಡಿನ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಶೀತಗಾಳಿ(Cold Wave) ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಜ. 5ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಕೆಲವೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ. ರಾಜ್ಯದ ಒಂದೆರಡು ಜಿಲ್ಲೆಗಳಿಗೆ ಮಂಜು ಕವಿಯುವ ಸಾಧ್ಯತೆ ಇದೆ. ಜ. 6ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಕೆಲವೆಡೆ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಜ. 7, 8 ಮತ್ತು 9ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.