ಅತ್ಯಾಚಾರ ಪ್ರಕರಣದಲ್ಲಿ ಕಳೆದ 6 ತಿಂಗಳುಗಳಿಂದ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಈಗ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.
ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಕಳೆದ 6 ತಿಂಗಳುಗಳಿಂದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದಾರೆ. ಹೀಗಾಗಿ ಪ್ರಜ್ವಲ್ ವಿರುದ್ಧ ಟ್ರಯಲ್ ಆರಂಭಿಸಲು ಎಸ್ ಐಟಿ ಮುಂದಾಗಿದೆ. ಈ ನಿಟ್ಟಿನಲ್ಲಿ ಇಂದು ಪ್ರಜ್ವಲ್ ವಿರುದ್ಧ ಎಸ್ ಐಟಿ ಚಾರ್ಜ್ ಫ್ರೇಮ್ ಆರಂಭಿಸಿ, ಟ್ರಯಲ್ ಪ್ರಾರಂಭ ಮಾಡಲಿದೆ.
ಪ್ರಜ್ವಲ್ ರನ್ನು ಪರಪ್ಪನ ಅಗ್ರಹಾರದಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಯಲದ ಎದುರು ಹಾಜರು ಪಡಿಸಿ ದೋಷಾರೋಪ ಪಟ್ಟಿಯ ಮೇಲೆ ಟ್ರಯಲ್ ಪ್ರಾರಂಭಿಸಲು ಎಸ್ ಐಟಿ ತಯಾರಿ ಮಾಡಿಕೊಂಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ.