ಕಲಬುರಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪೊಲೀಸರು, ಪ್ರತಿಭಟನಾಕಾರನ್ನು ತಡೆದರು. ಈ ವೇಳೆ ತಳ್ಳಾಟ, ನೂಕಾಟ ನಡೆಯಿತು. ಎರಡು ದಿನ ಹಿಂದಷ್ಟೇ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಒಳ್ಳೆ ರೀತಿಯಲ್ಲಿ ಆತಿಥ್ಯ ಕೊಡುತ್ತೇನೆ ಎಂದಿದ್ದರು. ಅದರಂತೆ ಮುತ್ತಿಗೆ ಹಾಕಲು ಬಂದ ಬಿಜೆಪಿ ನಾಯಕರಿಗೆ ಎಳನೀರು, ಕಾಫಿ, ಟೀ ವ್ಯವಸ್ಥೆ ಮಾಡಲಾಗಿತ್ತು.