ಮೈಸೂರು: ಈ ರಾಜ್ಯವನ್ನು ರಾಮರಾಜ್ಯ ಮಾಡದಿದ್ದರೆ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಗರದ ಸಾ.ರಾ.ಕಲ್ಯಾಣ ಮಂಟಪದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮುಂದೆ ಬಿಜೆಪಿ ಜೊತೆ ಸರ್ಕಾರ ಮಾಡುತ್ತೇನೆ.. ಆಗ ರಾಮರಾಜ್ಯ ಮಾಡುತ್ತೇನೆ. ಮುಂದಿನ ಬಾರಿ ಬಿಜೆಪಿ, ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆಂದು ಕಾಂಗ್ರೆಸ್ನವರು ಹೇಳುತ್ತಾರೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೇ ಅಂತಿಮವಲ್ಲ. 18 ಶಾಸಕರನ್ನು ಕರೆದೊಯ್ದಿದ್ದ ವೇಳೆ ಬಿಜೆಪಿ 17 ಸ್ಥಾನದಲ್ಲಿ ಗೆದ್ದಿತ್ತು. ಆಡಳಿತದಲ್ಲಿರುವ ಪಕ್ಷ ಗೆಲ್ಲುವುದು ಸಾಮಾನ್ಯ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ಕೆಟ್ಟ ಆಡಳಿತ. ಹೆಚ್ಡಿಕೆ ನೇತೃತ್ವದ ಸರ್ಕಾರಕ್ಕೆ ಕಾಂಗ್ರೆಸ್ನವರೇ ಅವಕಾಶ ಮಾಡಿಕೊಡ್ತಾರೆ.ಸಿಎಂ ಸತ್ಯ ಮೇವ ಜಯತೇ ಅಂತಾರೆ ಆದರೆ, ಎಲ್ಲಿದೆ ಸತ್ಯ ಎಂದು ವ್ಯಂಗ್ಯವಾಡಿದ್ದಾರೆ.
ಕೇಸ್ ದಾಖಲಿಸುವ ಬಗ್ಗೆ ಕಾರ್ಯಕರ್ತರು ಭಯಪಡಬೇಡಿ. ಕೇಂದ್ರ ಸಚಿವನಾಗಿರುವ ನನ್ನ ಮೇಲೆಯೇ ಕೇಸ್ ಹಾಕಿದ್ದಾರೆ. 2009ರಲ್ಲಿ ನನ್ನ ಮೇಲೆ ರಾಜಕೀಯವಾಗಿ ಕೇಸ್ ಹಾಕಿದ್ದಾರೆ. ಅದನ್ನು ಇನ್ನೂ ಹಾಗೆಯೇ ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ 18 ಲಕ್ಷ ಕೋಟಿ ಸಾಲ ಮಾಡಿದೆ. ರಾಜ್ಯ ಸರ್ಕಾರ ಜಾಗ ಕೊಡದಿದ್ದರೆ ಕೈಗಾರಿಕೆ ತರಲು ಸಾಧ್ಯವಾಗಲ್ಲ. ರಾಜ್ಯಕ್ಕೆ ಕೈಗಾರಿಕೆ ತರಬೇಕಾದರೆ ಸರ್ಕಾರ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.