ನವದೆಹಲಿ: ಪಾಕ್ ಸೈನಿಕರಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಪಾಕಿಸ್ತಾನದ ಬಲೂಚಿಸ್ತಾನದ ಟರ್ಬತ್ ನಲ್ಲಿ ಈ ದಾಳಿ ನಡೆದಿದೆ. ಪಾಕ್ ಸೈನಿಕರು ತೆರಳುತ್ತಿದ್ದ ಬಸ್ ಮೇಲೆ ಬಾಂಬ್ ಹಾಕಲಾಗಿದೆ. ಪರಿಣಾಮ ನಾಲ್ವರು ಸುಟ್ಟು ಕರಕಲಾಗಿದ್ದಾರೆ. ಅಲ್ಲದೇ, ಈ ವಾಹನದಲ್ಲಿ ಸುಮಾರು 48 ಜನರು ತೆರಳುತ್ತಿದ್ದರು ಎನ್ನಲಾಗಿದೆ. ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಂಬ್ ದಾಳಿಯಿಂದಾಗಿ ಬಸ್ ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಾಂಬ್ ದಾಳಿಯ ಹಿಂದೆ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ಕೈವಾಡವಿರುವ ಕುರಿತು ಅನುಮಾನ ವ್ಯಕ್ತವಾಗಿದೆ.