ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿಯ ಸದಾಶಿವ ನಗರದಲ್ಲಿ ನಡೆದಿದೆ.
ದಂಪತಿಗಳಿಬ್ಬರು ತಮ್ಮ ಇಬ್ಬರು ಮಕ್ಕಳಿಗೆ ವಿಷವಿಟ್ಟು, ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನೂಪ್ ಮತ್ತ ರಾಕಿ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೂ ಮುನ್ನ ತಮ್ಮಿಬ್ಬರು ಮಕ್ಕಳಿಗೆ ವಿಷವಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ಚು ಸಾಲ ಮಾಡಿಕೊಂಡಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.