ಆನೇಕಲ್: ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಲ್ಲದೇ ಘಟನೆಯಲ್ಲಿ ಒಂದು ಮಹಡಿ ಸಂಪೂರ್ಣ ಛಿದ್ರವಾಗಿದೆ. ಈ ಘಟನೆ ಬೊಮ್ಮಸಂದ್ರ (Bommasandra) ಸಮೀಪದ ಕಿತ್ತಗಾನ ಹಳ್ಳಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಕೇರಳ ಮೂಲದ ವಿಶ್ವ ಹಾಗೂ ತಮಿಳುನಾಡು ಮೂಲದ ಸುನಿಲ್ ಜಾದವ್ ಎನ್ನಲಾಗಿದೆ.
ಗಾಯಗೊಂಡವರು ನಾರಾಯಣ ಹೃದಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಯನಗರ ಮೂಲದ ಸುನಿಲ್ ಎಂಬುವವರಿಗೆ ಸೇರಿದ್ದ ಕಟ್ಟಡದಲ್ಲಿ ಇಬ್ಬರು ವಾಸವಾಗಿದ್ದರು. ಕೆಲಸಕ್ಕೆ ಹೋಗಲು ಒಬ್ಬರು ಸ್ನಾನ ಮಾಡುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಮತ್ತೋರ್ವ ವ್ಯಕ್ತಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡನೇ ಅಂತಸ್ತಿನಿಂದ ಕೆಳಗೆ ಬಿದ್ದಿದ್ದಾನೆ. ಸ್ಫೋಟದ ತೀವ್ರತೆಗೆ ಕಟ್ಟಡದ ಹಾಲೋ ಬ್ಲಾಕ್ ಗಳು ಹಾರಿ ಹೋಗಿವೆ. ಬಿಲ್ಡಿಂಗ್ ನಾಲ್ಕು ಪಿಲ್ಲರ್‌ಗಳು ಕೂಡ ಛಿದ್ರಗೊಂಡಿವೆ. ಘಟನೆಯಲ್ಲಿ ನಾಲ್ಕು ಬಿಲ್ಡಿಂಗ್, 3 ಕಾರು, 6 ದ್ವಿ ಚಕ್ರ ವಾಹನಗಳು ಹಾನಿಯಾಗಿವೆ.