ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಬಸ್ ಟಿಕೆಟ್ ದರ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್ ನೀಡಿದೆ.
ಸಾರಿಗೆ ಸಿಬ್ಬಂದಿಗೆ ನಗದು ರಹಿತ ಆರೋಗ್ಯ ಸೇವೆ ನೀಡಲು ಸಾರಿಗೆ ಇಲಾಖೆ ಯೋಜನೆ ರೂಪಿಸಿದೆ. ಸಾರಿಗೆ ನೌಕರರು ಒತ್ತಡ, ಹೃದಯಘಾತ ಸೇರಿದಂತೆ ಸಾಕಷ್ಟು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಕರ್ತವ್ಯದಲ್ಲೇ ಹಲವಾರು ನೌಕರಸ್ಥರು ಜೀವ ಕಳೆದುಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಸಾರಿಗೆ ಇಲಾಖೆ ನಿಗಮವು ನೌಕರರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ನಗದು ರಹಿತ ಆರೋಗ್ಯ ಸೇವೆ ಆರಂಭಿಸುತ್ತಿದೆ.
ಸಿಎಂ ಸಿದ್ದರಾಮಯ್ಯ ಇಂದು ನಗದು ರಹಿತ ಆರೋಗ್ಯ ಸೇವೆ ಯೋಜನೆಗೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ 225 ಸರ್ಕಾರಿ, ಖಾಸಗಿ ಆಸ್ಪತ್ರೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಈ ಆಸ್ಪತ್ರೆಗಳಲ್ಲಿ ಕೆಎಸ್ ಆರ್ಟಿಸಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ.