ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಪ್ರಮುಖ ಆರೋಪಿ, ನಟ ದರ್ಶನ್ ಸೇರಿದಂತೆ ಪ್ರಕರಣದ 7 ಜನ ಆರೋಪಿಗಳಿಗೆ ಮತ್ತೆ ಶಾಕ್ ಎದುರಾಗಿದೆ.
ಈಗಾಗಲೇ ದರ್ಶನ್ (Actor Darshan) ಸೇರಿದಂತೆ ಆರೋಪಿಗಳು ಬೇಲ್ (Bail) ಪಡೆದು ಹೊರಗೆ ಬಂದಿದ್ದಾರೆ. ಈಗ ದರ್ಶನ್ ಸೇರಿದಂತೆ ಏಳು ಜನ ಆರೋಪಿಗಳಿಗೆ (Accused) ಜಾಮೀನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ (Supreme Court) ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿರುವ 17 ಜನರಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಜನ ಆರೋಪಿಗಳ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನಟ ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್, ಜಗದೀಶ್ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ.