ಶಿವಮೊಗ್ಗ: ಸಿಎಂ ಸಿದ್ದರಾಮಯ್ಯರಿಗೆ ದಯಾಮರಣ ಕೋರಿ ಗುತ್ತಿಗೆದಾರರು ಪತ್ರ ಬರೆದಿದ್ದಾರೆ. ಪೂರ್ಣಗೊಂಡ ಕಾಮಗಾರಿಗಳಿಗೆ ಬಿಲ್ ಪಾವತಿ ಆಗದ ಹಿನ್ನೆಲೆಯಲ್ಲಿ ದಯಾ ಮರಣ ಕೋರಿ ಗುತ್ತಿಗೆದಾರರು ಪತ್ರ ಬರೆದಿದ್ದಾರೆ.
ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ (Teerthahalli) ತಾಲೂಕಿನ ಗುತ್ತಿಗೆದಾರರು ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಪ್ರತಿಯನ್ನು ಮಾಜಿ ಗೃಹಸಚಿವ, ತೀರ್ಥಹಳ್ಳಿ ಹಾಲಿ ಶಾಸಕ ಆರಗ ಜ್ಞಾನೇಂದ್ರ (Araga Jnanendra) ರಿಗೂ ಕಳುಹಿಸಿದ್ದಾರೆ.
ತೀರ್ಥಹಳ್ಳಿಯ ನಾಲ್ವರು ಗುತ್ತಿಗೆದಾರರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ದಯಾ ಮರಣ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ತಾಲೂಕಿನಲ್ಲಿ ಕಾಮಗಾರಿ ಪೂರ್ಣಗೊಂಡಿದ್ದರೂ ಕಳೆದ ಎರಡ್ಮೂರು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಯಿಂದ ಹಣ ಬಿಡುಗಡೆ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಗುತ್ತಿಗೆ ಕೆಲಸವನ್ನೇ ಮಾಡಿಕೊಂಡಿರುವ ನಮಗೆ ಹಣ ಬಾರದಿರುವುದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ. ಹೀಗಾಗಿ ಕೂಡಲೇ ಹಣ ಮಂಜೂರು ಮಾಡಬೇಕು. ಇಲ್ಲವಾದರೆ ದಯಾಮರಣ ನೀಡಿ ಎಂದು ಮನವಿ ಮಾಡಿದ್ದಾರೆ.