ಬಾಗಲಕೋಟೆ: ಸ್ನಾನ ಮಾಡಲು ಹೋಗುತ್ತಿದ್ದ ಮಹಿಳೆಯ ತಲೆಗೆ ಅಪರಿಚಿತರು ಹೊಡೆದು ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ.
ಶೋಭಾ ಪರಶುರಾಮ್ ಮಾಂಗ್ (40) ಕೊಲೆಯಾಗಿರುವ ಮಹಿಳೆ. ಜಿಲ್ಲೆಯ ಜಮಖಂಡಿ ತಾಲೂಕಿನ ಮುತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾಗಿರುವ ಮಹಿಳೆ ಹಿತ್ತಲಿಗೆ ಸ್ನಾನ ಮಾಡಲು ಹೋಗಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ತಲೆಗೆ ಹೊಡೆದಿದ್ದಾರೆ. ಪರಿಣಾಮ ಮಹಿಳೆ ತೀವ್ರ ರಕ್ತಸ್ರಾವರಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆದರೆ, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ ಐ ಗಂಗಾಧರ ಪೂಜೇರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.