ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಆಶ್ಲೀಲ ಪದ ಬಳಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ (Vidhan parishat) ಸದಸ್ಯ ಸಿ.ಟಿ. ರವಿ ಇಂದು ಸಿಐಡಿ ವಿಚಾರಣೆಗೆ ಹಾಜರಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಯ ವೇಳೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಶ್ಲೀಲ ಪದ ಬಳಕೆ ಮಾಡಿರುವ ಆರೋಪವನ್ನು ಸಿ.ಟಿ. ರವಿ (ct.ravi)ಎದುರಿಸುತ್ತಿದ್ದಾರೆ.
ಈ ಪ್ರಕರಣ ದೊಡ್ಡ ಸಂಘರ್ಷಕ್ಕೆ ಕಾರಣವಾಗಿತ್ತು. ಘಟನೆ ನಡೆದ ದಿನ ಲಕ್ಷ್ಮೀ ಹೆಬ್ಬಾಳ್ಕರ್ (Laxmi hebbalkar)ಬೆಂಬಲಿಗರು ಸಿ.ಟಿ. ರವಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಸುವರ್ಣಸೌಧದಿಂದಲೇ ಸಿ.ಟಿ.ರವಿಯನ್ನು ಪೊಲೀಸರು ಅರೆಸ್ಟ್ (Arrest)ಮಾಡಿದ್ದರು. ಆನಂತರ ಬಿಜೆಪಿ (BJP)ಪ್ರತಿಭಟನೆ ನಡೆಸಿತ್ತು. ಪದ ಬಳಕೆಯ ವಿರುದ್ಧ ಕಾಂಗ್ರೆಸ್ (Congress)ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
ಈಗಾಗಲೇ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ, (CID)ವಿಚಾರಣೆಗೆ ಹಾಜರಾಗುವಂತೆ ಸಿ.ಟಿ. ರವಿಗೆ ಸೂಚಿಸಿದೆ. ಇಂದು ವಿಚಾರಣೆಗೆ ಹಾಜರಾಗುವ ರವಿ ಘಟನೆಯ ಕುರಿತು ಮಾಹಿತಿ ನೀಡಲಿದ್ದಾರೆ.