ಸಿಎಂ ಸಿದ್ದರಾಮಯ್ಯ(CM Siddaramaiah) ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚಿಸಲಾಯಿತು. ರಾಜೀವ್ ಗಾಂಧಿ(Rajiv Gandhi) ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲ ಸೌಲಭ್ಯಗಳಿಗಾಗಿ ಬಳಕೆ ಮಾಡುವಂತೆ ಸಿಎಂ ಸೂಚಿಸಿದರು.
ನಿಮ್ಹಾನ್ಸ್(Nimhans) ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ (Sharanprakash Patil) ಗೆ ಸಿಎಂ ಸೂಚಿಸಿದರು. ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ(medical colleges) ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
2024-25 ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4,331 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದ್ದು, ಇಲ್ಲಿಯವರೆಗೆ 3,099 ಕೋಟಿ ರೂ. ಅನುದಾನ(grant) ಬಿಡುಗಡೆಯಾಗಿದೆ. ಈ ಪೈಕಿ ಈಗಾಗಲೇ 3005 ಕೋಟಿ ರೂ. ರೂ. ಖರ್ಚು ಮಾಡಲಾಗಿದೆ. ಬಿಡುಗಡೆ ಮೊತ್ತಕ್ಕೆ ಶೇ. 96.97 ರೂ. ಪ್ರಗತಿ ಸಾಧಿಸಲಾಗಿದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.