ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ(Central government) ಅನ್ಯಾಯ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಕುಂಭಕೋಣಂನಲ್ಲಿ(Kumbakonam) ಮಾತನಾಡಿರುವ ಅವರು, ಕೇಂದ್ರ ಸರ್ಕಾರ ತಮ್ಮ ಪಕ್ಷ ಹಾಗೂ ಮಿತ್ರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಮಾತ್ರ ಅನುದಾನ ನೀಡುತ್ತಿದೆ. ಆದರೆ, ಬಿಜೆಪಿಯೇತರ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ(Right fight) ಮಾಡುತ್ತಿವೆ ಎಂದು ಹೇಳಿದ್ದಾರೆ.
ಬಿಜೆಪಿ(BJP) ಸರ್ಕಾರ ಇಲ್ಲದ ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇಂದ್ರ ಸರ್ಕಾರಕ್ಕೆ ನಾವು ನೀಡುವ ತೆರಿಗೆಗೆ ತಕ್ಕಂತೆ ನಮಗೆ ಅನುದಾನ(grants) ಬರುತ್ತಿಲ್ಲ. ಈ ವಿಚಾರದಲ್ಲಿ ನಾವೆಲ್ಲರೂ ಒಟ್ಟಿಗೆ ಹೋರಾಟ (protest) ಮಾಡಬೇಕಿದೆ ಎಂದು ಹೇಳಿದ್ದಾರೆ.
ವಿದೇಶ ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್(D.K. Shivakumar) ಈಗ ದೇಶಕ್ಕೆ ಮರಳಿ ಹೋಗಿದ್ದಾರೆ. ವಿದೇಶದಿಂದ ಬೆಂಗಳೂರಿಗೆ ಬಾರದ ಅವರು ನೇರವಾಗಿ ದೆಹಲಿಗೆ ಬಂದಿದ್ದಾರೆ. ಎರಡ್ಮೂರು ದಿನ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಅವರು, ಈಗ ಟೆಂಪಲ್ ರನ್ ನಡೆಸಿದ್ದಾರೆ. ದೇಶದಲ್ಲಿನ ಪ್ರಸಿದ್ಧ ದೇವಸ್ಥಾನಗಳಿಗೆ(temple)ತೆರಳಿ ವಿಶೇಷ ಪೂಜೆ ನಡೆಸುತ್ತಿದ್ದಾರೆ.