ಬೆಂಗಳೂರು: ನಗರದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಗೋವಿಂದ್ .ಕೆ ಆತ್ಮಹತ್ಯೆ ಮಾಡಿಕೊಂಡ ಕಾನ್ಸ್ ಟೇಬಲ್. ಆಸ್ಟಿನ್ ಟೌನ್ ನಲ್ಲಿರುವ ಕ್ವಾಟ್ರಸ್ ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋವಿಂದ್ ವಿವೇಕ್ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆತ್ಮಹತ್ಯೆ ಮಾಡಿಕೊಂಡಿರುವ ಗೋವಿಂದ್ ಮೂಲತಃ ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ವಿವೇಕನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಕೌಟುಂಬಿಕ ಕಲಹದಿಂದಾಗಿ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಈ ಘಟನೆ ಕುರಿತು ವಿವೇಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.