ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಪುಡಿ ರೌಡಿಗಳ ಹಾವಳಿ ಹೆಚ್ಚಾಗುತ್ತಿದ್ದು, ಜನರು ಭಯದಿಂದ ಓಡಾಡುವಂತಾಗುತ್ತಿದೆ. ರಾತ್ರಿವೇಳೆಯಂತೂ ಓಡಾಡೋದೆ ಕಷ್ಟ ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಇತ್ತೀಚೆಗಷ್ಟೇ ಭೂಪಸಂದ್ರ ರಸ್ತೆಯಲ್ಲಿ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ.
ಹಲಸೂರು ಪೊಲೀಸ್ ಠಾಣೆ (police station)ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಾಹನ ಸವಾರರೊಬ್ಬರ ಮೇಲೆ ಪುಂಡರ ಗುಂಪೊಂದು ಕಿರಿಕ್ ಮಾಡಿ ಹಲ್ಲೆ ಮಾಡಿದೆ. ಸುಖಾಸುಮ್ಮನೆ ಕಿರಿಕ್ ಮಾಡಿ ಕಾರಿನ ಗ್ಲಾಸ್ ಒಡೆದು ಹಲ್ಲೆ ಮಾಡಲಾಗಿದೆ. ಈ ಕುರಿತು ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.